ಮಂಗಳೂರು : ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ.
©2021 Tulunada Surya | Developed by CuriousLabs