Monday, July 15, 2024
spot_img
More

  Latest Posts

  ಕಾಮನ್‌ವೆಲ್ತ್‌ ಗೇಮ್ಸ್‌: ಕಂಚಿನ ಪದಕ ಗೆದ್ದ ಗುರುರಾಜ್‌ ಪೂಜಾರಿಗೆ ತವರು ಜಿಲ್ಲೆಯಲ್ಲಿ ಸನ್ಮಾನ

  ಉಡುಪಿ: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ 61 ಕೆಜಿ ವೇಯ್ಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತ ಕುಂದಾಪುರದ ಗುರುರಾಜ್ ಪೂಜಾರಿ ಅವರು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ಬಂದಿಳಿದಾಗ ಅವರನ್ನು ಉಡುಪಿ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು.

  ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಗುರುರಾಜ್ ಪೂಜಾರಿ ಅವರನ್ನು ಸ್ವಾಗತಿಸಿದರು.  ಬಳಿಕ ಉಡುಪಿ ಅಜ್ಜರಕಾಡುವಿನಲ್ಲಿರುವ ಜಿಲ್ಲಾ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.

  ಅಪರ ಜಿಲ್ಲಾಧಿಕಾರಿ ವೀಣಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕ ಡಾ. ರೋಶನ್ ಶೆಟ್ಟಿ, ಗುರುರಾಜ್ ಅವರ ತಂದೆ ಮಹಾಬಲ ಪೂಜಾರಿ, ಗುರುರಾಜ್ ಪತ್ನಿ ಸೌಜನ್ಯಾ, ಉದಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss