ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸದಂತೆ ಮಹತ್ವದ ಸೂಚನೆ ನೀಡಿದೆ.ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಪ್ರಕರಣಗಳಿಗೆ ಪೋಷಕರು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದು, ಹೀಗಾಗಿ ನಕಲು ತಡೆಗಟ್ಟಲು 2024 ರ ಮಾರ್ಚ್/ಏಪ್ರಿಲ್ ನಲ್ಲಿ ಎಸ್‌ಎಸ್ ಎಲ್ ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸದಂತೆ ಸೂಚನೆ ನೀಡಿದೆ.ಕಳೆದ ವರ್ಷ ರಾಜ್ಯದ 724 ಜಿಲ್ಲಾ, 755 ತಾಲೂಕು, 604 ಹೋಬಳಿ ಮತ್ತು 1,222 ಗ್ರಾಮೀಣ ಪ್ರದೇಶದ ಕೇಂದ್ರಗಳು ಸೇರಿ ರಾಜ್ಯಾದ್ಯಂತ ಒಟ್ಟಾರೆ 3,305 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಗ್ರಾಮೀಣ ಪ್ರದೇಶಗಳಿಗೆ ಕೊಕ್ ನೀಡಿ, ಹೋಬಳಿ, ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ.
©2021 Tulunada Surya | Developed by CuriousLabs