ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು. ಇದೇ ವಾರ ಎಸ್ ಎಸ್ ಎಲ್ ಸಿ ಫಲಿತಾಂಶ (SSLC Result) ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮಾರ್ಚ್ 31 ರಿಂದ ಆರಂಭವಾಗಿದ್ದ ಎಸ್‌ಎಸ್ ಎಲ್ ಸಿ ಪರೀಕ್ಷೆಗಳು ಏಪ್ರಿಲ್ 15 ಕ್ಕೆ ಮುಕ್ತಾಯಗೊಂಡಿದ್ದವು.
ಎಸ್‌ಎಸ್ ಎಲ್ ಸಿ ಪರೀಕ್ಷೆಯನ್ನು 8.6 ಲಕ್ಷ ವಿದ್ಯಾರ್ಥಿಗಳು ಬರೆದಿದ್ದು, ಅಂದಾಜು 45 ಲಕ್ಷ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗಿದೆ.. ಮೌಲ್ಯಮಾಪನ ಕಾರ್ಯವನ್ನು ಶೀಘ್ರವೇ ಮುಗಿಯುವ ಸಾಧ್ಯತೆ ಇದ್ದು, ಮೇ. ಮೊದಲ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.ಅಧಿಕೃತ ವೆಬ್ಸೈಟ್-karresults.nic.in ಗೆ ಹೋಗಿ, ಮುಖಪುಟದಲ್ಲಿ, ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ದರೆ ಹೊಸ ಲಾಗಿನ್ ಪುಟ ತೆರೆಯುತ್ತದೆ, ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು (Register Number) ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿದರೆ ಫಲಿತಾಂಶ ವೀಕ್ಷಿಸಬಹುದು.
