ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (Karnataka Secondary Education Examination Board -KSEEB) ತನ್ನ 2022 ರ ಪರೀಕ್ಷೆಗಳ ಫಲಿತಾಂಶಗಳನ್ನು ಈ ವಾರ ಪ್ರಕಟಿಸಲಿದೆ. ಪರೀಕ್ಷಾ ಫಲಿತಾಂಶಗಳ ದಿನಾಂಕಗಳನ್ನು ಮಂಡಳಿಯು ಘೋಷಿಸಿಲ್ಲ ಆದರೆ ಅದು ಮುಂದಿನ ಒಂದೆರಡು ದಿನಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ನಂತ್ರ, ವಿದ್ಯಾರ್ಥಿಗಳು ತಮ್ಮ ಫಲಿತಾಂಶ ವೀಕ್ಷಣೆಯ ಬಗ್ಗೆ ಕೆ ಎಸ್ ಇ ಇ ಬಿ ಬೋರ್ಡ್ ಅಧಿಕೃತ ಮಾಹಿತಿ ತಿಳಿಸಲಿದೆ.
ವರದಿಗಳ ಪ್ರಕಾರ, ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2022 ( Karnataka SSLC Result 2022 ) ಮೇ 14 ರೊಳಗೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗೆ ಪ್ರಕಟಗೊಂಡಂತ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ karresults.nic.in ಮತ್ತು sslc.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.
ಫಲಿತಾಂಶ ವೀಕ್ಷಿಸಲು ಈ ಕ್ರಮ ಅನುಸರಿಸಿ
- ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಫಲಿತಾಂಶ ಘೋಷಣೆಯಾದ ನಂತ್ರ, karresults.nic.in ಮತ್ತು sslc.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು.
- ಈ ಪುಟದಲ್ಲಿ ತೋರಿಸುವಂತ ಎಸ್ ಎಸ್ ಎಲ್ ಸಿ ಫಲಿತಾಂಶ ವೀಕ್ಷಣೆಯ ಲಿಂಕ್ ಕ್ಲಿಕ್ ಮಾಡಬೇಕು.
- ಆಗ ತೆರೆದುಕೊಳ್ಳುವಂತ ಮತ್ತೊಂದು ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆ ನಮೂದಿಸಿದಬೇಕು.
- ಈ ಬಳಿಕ, ಫಲಿತಾಂಶ ವೀಕ್ಷಣೆಯ ಬಳಿಯಲ್ಲಿ ದ್ರೇ.. ನಿಮ್ಮ ಎಸ್ ಎಸ್ ಎಲ್ ಸಿ ಫಲಿತಾಂಶ ಸಿಗಲಿದೆ
ಅಂದಹಾಗೇ, ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8.76 ಲಕ್ಷ ವಿದ್ಯಾರ್ಥಿಗಳ ನೋಂದಣಿಯಾಗಿದೆ. ಮಾರ್ಚ್ 28, 2022 ರಿಂದ ಏಪ್ರಿಲ್ 11, 2022 ರವರೆಗೆ ರಾಜ್ಯದ 3440 ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಯಿತು.

