ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಗಳು ಪೂರ್ಣಗೊಂಡಿದ್ದು, ಫಲಿತಾಂಶವು ಮೇ ಎರಡನೇ ವಾರದಲ್ಲಿ ಪ್ರಕಟವಾಗಲಿದೆ. ಪೂರಕ ಪರೀಕ್ಷೆಗಳನ್ನು ಜೂನ್ ತಿಂಗಳ ಕೊನೆಯ ವಾರದಲ್ಲಿ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 11,2022ರ ವರೆಗೆ ನಡೆಸಲಾಗಿತ್ತು. ಎಸ್ಎಸ್ಎಲ್ಸಿ ಪರೀಕ್ಷೆಯ ಎಲ್ಲಾ ವಿಷಯಗಳು ಸುಸೂತ್ರವಾಗಿ ನಡೆದಿದ್ದು, ಫಲಿತಾಂಶವು ಮೇ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆಯಿದೆ. ಹತ್ತನೇ ತರಗತಿಯ ಪೂರಕ ಪರೀಕ್ಷೆಯು ಜೂನ್ ಕೊನೆಯ ವಾರದಲ್ಲಿ ನಡೆಯಲಿದೆ ಎಂದು ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಫಲಿತಾಂಶ ಪ್ರಕಟವಾಗುವ ನಿಖರವಾದ ದಿನಾಂಕವನ್ನು ಮಂಡಳಿಯು ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿದ ನಂತರ ಮತ್ತು ಫಲಿತಾಂಶದ ಡೇಟಾವನ್ನು ಸಂಸ್ಕರಿಸಿದ ನಂತರ ಮಾತ್ರ ಸೂಚಿಸಲಾಗುತ್ತದೆ. ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ – sslc.karnataka.gov.in ಗೆ ಭೇಟಿ ನೀಡುವ ಮೂಲಕ ವೀಕ್ಷಿಸಬಹುದು.