Saturday, July 27, 2024
spot_img
More

    Latest Posts

    ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನೋಂದಣಿಗೆ ನಾಳೆಯೇ ಕೊನೆಯ ದಿನ

    ಬೆಂಗಳೂರು: ಜೂನ್ 2023ರಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಹಾಗೂ ಮಾರ್ಚ್ 2023ರ ಮುಖ್ಯ ಪರೀಕ್ಷೆಯಲ್ಲಿ ಹಾಜರಾದ ವಿದ್ಯಾರ್ಥಿಗಳ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ದಿನಾಂಕವನ್ನು ವಿಸ್ತರಿಸಲಾಗಿದೆ.

    ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಪರೀಕ್ಷೆಗಳ ನಿರ್ದೇಶಕರಾದಂತ ಹೆಚ್ ಎನ್ ಗೋಪಾಲಕೃಷ್ಣ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ 2023ನೇ ಜೂನ್ ನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ ಲೈನ್ ಮುಖಾಂತರ ನೋಂದಾಯಿಸಲು ಅವಧಿಯನ್ನು ದಿನಾಂಕ 15-05-2023ರವರೆಗೆ ನಿಗಧಿಗೊಳಿಸಲಾಗಿತ್ತು ಎಂದಿದ್ದಾರೆ.

    ಮಾರ್ಚ್ 2023ರ ಮುಖ್ಯ ಪರೀಕ್ಷೆಯಲ್ಲಿ ಹಾಜರಾದ ವಿದ್ಯಾರ್ಥಿಗಳ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ದಿನಾಂಕ 14-05-2023ರವರೆಗೆ ನಿಗದಿಗೊಳಿಸಲಾಗಿತ್ತು. ಈ ಅವಧಿಯನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

    • ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ ಲೋಡ್ ಮಾಡಲು ನಿಗದಿಪಡಿಸಿದ ಅಂತಿಮ ದಿನಾಂಕ 18-05-2023 ಆಗಿದೆ.
    • ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ದಿನಾಂಕ 19-05-2023 ಕೊನೆ
    • ಚಲನ್ ಮುದ್ರಿಸಿಕೊಂಡು ಬ್ಯಾಂಕ್ ಗೆ ಜಮೆ ಮಾಡಲು ನಿಗದಿಪಡಿಸಿದ ದಿನಾಂಕ 20-05-2023ಶುಲ್ಕವನ್ನು ನೆಫ್ಟ್ ಮೂಲಕ ಪಾವತಿಸಲು 20-05-2023 ಕೊನೆ.
    • ದಾಖಲೆಗಳನ್ನು ಮಂಡಳಿಗೆ ಸಲ್ಲಿಸಲು ಅಂತಿಮ ದಿನಾಂಕ 25-05-2023
    • ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ 18-05-2023
    • ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಿದ ನಂತ್ರ ಆಫ್ ಲೈನ್ ಚಲನ್ ಡೌನ್ ಲೋಡ್ ಮಾಡಿಕೊಂಡು ಶುಲ್ಕವನ್ನು ಪಾವತಿಸಲು ಅಂತಿಮ ದಿನಾಂಕ 19-05-2023

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss