ಬೆಂಗಳೂರು : ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. 12:06:2023 ರಿಂದ ಪರೀಕ್ಷೆ ಆರಂಭವಾಗಿ 19:06:2023 ರವರೆಗೆ ಪರೀಕ್ಷೆ ನಡೆಯಲಿದೆ.
2022-23ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15ರ ವರೆಗೆ ಅವಕಾಶ ನೀಡಲಾಗಿತ್ತು.ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. 12:06:2023 ರಿಂದ ಪರೀಕ್ಷೆ ಆರಂಭವಾಗಿ 19:06:2023 ರವರೆಗೆ ಪರೀಕ್ಷೆ ನಡೆಯಲಿದೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ. ಅತ್ಯಂತ ವ್ಯವಸ್ಥಿತವಾಗಿ ಈ ಬಾರಿ ಪೂರಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.