ಬೆಂಗಳೂರು : ಸಾರಿಗೆ ನೌಕರರಿಗೆ ಶೇ. 15 ರಷ್ಟು ವೇತನ ಹೆಚ್ಚಳ ಮಾಡಿರುವುದಕ್ಕೆ ವಿರೋಧಿಸಿ ಉಪವಾಸ ಸತ್ಯಗ್ರಹ ನಡೆಸುತ್ತಿದ್ದ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಅವರು ಶಾಂತಿನಗರದ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಮುಂದೆ ಉಪವಾಸ ಸತ್ಯಗ್ರಹ ಕುಳಿತಿದ್ದರು.
ಈ ವೇಳೆ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಚಂದ್ರಶೇಖರ್ ರನ್ನು ವಶಕ್ಕೆ ಪಡೆದಿದ್ದಾರೆ.
ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿರುವುದ ಹಾಗೂ ಸಾರಿಗೆ ನೌಕರರಿಗೆ ಶೇ. 15 ರಷ್ಟು ವೇತನ ಹೆಚ್ಚಳಮಾಡಿರುವುದನ್ನು ವಿರೋಧಿಸಿ ಮಾರ್ಚ್ 24 ರಂದು ಮುಷ್ಕರ ನಡೆಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಉಪವಾಸ ಕುಳಿತಿದ್ದರು.
