Saturday, June 15, 2024
spot_img
More

  Latest Posts

  ಬೆಳ್ತಂಗಡಿ: ರಕ್ತದೊತ್ತಡದಿಂದ ಬಳಲುತ್ತಿದ್ದ ITI ವಿದ್ಯಾರ್ಥಿ ಮೃತ್ಯು..!

  ಬೆಳ್ತಂಗಡಿ: ತೀವ್ರ ರಕ್ತದ ಒತ್ತಡದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬರು ಕೊನೆಯುಸಿರೆಳೆದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸನ್ನ ಕಾಲೇಜಿನ ಫೈನಲ್ ಇಯರ್ ಐಟಿಐ ವಿದ್ಯಾರ್ಥಿ ಕಾಲೇಜ್ ವಿದ್ಯಾರ್ಥಿ ಸುಮಂತ್ (20) ಮೃತಪಟ್ಟ ದುರ್ದೈವಿ.

  ಬಾರ್ಯ ಗ್ರಾಮದ ಗಿರಿಗುಡ್ಡೆ ಸುಶೀಲ ಎಂಬುವವರ ಸುಮಂತ ಮಡಿವಾಳ ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಕಳೆದ ಒಂದು ವಾರದ ಹಿಂದೆ ಕಾಲೇಜಿನಲ್ಲಿ ಬಿದ್ದಿದ್ದ ಸುಮಂತ್‌ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸುಮಂತ್ ಸಾವನ್ನಪ್ಪಿದ್ದಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss