ಬೆಳ್ತಂಗಡಿ : ತಾಲೂಕಿನ ವೇಣೂರಿನ ಗುಂಡೂರಿ ಗ್ರಾಮದ ಅಶೋಕ ನಿವಾಸ ನಿವಾಸಿ, ವೇಣೂರು ಸ.ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು| ಅಂಕಿತಾ (17) ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅಶೋಕ ಪೂಜಾರಿ ಮತ್ತು ಪ್ರತಿಮಾ ದಂಪತಿಯ ಪುತ್ರಿಯಾಗಿರುವ ಈಕೆ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿ ಅಲ್ಲಿ ಚಿಕಿತ್ಸೆ ಮುಂದುವರಿಸಿದ್ದರು.
ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಂಕಿತಾ ಇಹಲೋಕ ತ್ಯಜಿಸಿದ್ದಾರೆ. ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಈಕೆ ತಂದೆ ತಾಯಿ ಮತ್ತು ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
©2021 Tulunada Surya | Developed by CuriousLabs