ಪುತ್ತೂರು : ಕಟ್ಟಡದ 5ನೇ ಮಹಡಿಯಿಂದ ಬಿದ್ದು 9ನೇ ತರಗತಿಯ ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ಬೊಳುವಾರು ವಸತಿ ಸಮುಚ್ಚಾಯವೊಂದರ ಬಿ ಬ್ಲಾಕ್ ನಲ್ಲಿ ನಡೆದಿದೆ.
ಮೃತ ಬಾಲಕನನ್ನು ಸುದಾನ ವಸತಿಯುತ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ (15) ಎಂದು ಗುರುತಿಸಲಾಗಿದೆ. ಸುಶಾನ್ ರೈ ಶಾಲೆಯಿಂದ ಮನೆಗೆ ಹೋಗದೆ ಬೊಳುವಾರು ವಸತಿ ಸಮುಚ್ಚಾಯಕ್ಕೆ ತೆರಳಿದ್ದ. ಸಮುಚ್ಚಾಯದ ಕೆಳಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಆತ ಪತ್ತೆಯಾಗಿದ್ದ. ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.
ಕಟ್ಟಡದಲ್ಲಿ ಶಾಲಾ ಬ್ಯಾಗ್ ಪತ್ತೆ: ಸುಶಾನ್ ರೈ ಶಾಲೆಯಿಂದ ಮನೆಗೆ ಹೋಗದೆ ವಸತಿ ಸಮುಚ್ಚಾಯಕ್ಕೆ ಸಂಜೆ 4.20ಕ್ಕೆ ಬಂದಿರುವುದು ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಕೆಲವೇ ನಿಮಿಷದಲ್ಲಿ ಆತ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ಆದರೆ, ಆತನ ಶಾಲಾ ಬ್ಯಾಗ್ 5ನೇ ಮಹಡಿಯಲ್ಲಿ ಪತ್ತೆಯಾಗಿದೆ.