ಉಳ್ಳಾಲ: ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ಯುವಕ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ.
ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ಪ್ರಥಮ ಪಿಯುಸಿಯನ್ನು ಕಪಿತಾನಿಯೋ ದಲ್ಲಿ ಮುಗಿಸಿದ್ದ ಸುಶಾಂತ್ ನಗರದ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ಆ.2 ಕ್ಕೆ ಸೇರಿಸಿದ್ದಾರೆ.ಈ ವೇಳೆ 500 ರೂ. ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು.
ಇಂದು ಬೆಳಿಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ನೀಡಿರಲಿಲ್ಲ.
ಇದರಿಂದ ಕೋಪದಲ್ಲಿ ಮನೆಯಲ್ಲೇ ಉಳಿದುಕೊಂಡ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲೇ ಇದ್ದ ಸಂದರ್ಭ ಕೋಣೆಯೊಳಗೆ ಮನೆಯ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.