ಮಂಗಳೂರು: ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಕಾಸರಗೋಡಿನ ರೈಲ್ಚೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಕಡಪ್ಪುರದ ಸುರೇಂದ್ರರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.ಅಂಜನಾ ಮಂಗಳೂರು ಸೈ೦ಟ್ ಅಲೋಶಿಯಸ್ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದರು.
ಸೋಮವಾರ ರಾತ್ರಿ ಊಟ ಮಾಡಿ ಮಲಗಿದ್ದ ಅಂಜನಾ ಇಂದು ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು.
ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.
ಸ್ಥಳಕ್ಕೆ ಕಾಸರಗೋಡು ನಗರ ಠಾಣಾ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.ಇದು ಆತ್ಮಹತ್ಯೆಯ ಅಥವಾ ಅವಘಡವ ಎನ್ನುವುದು ತನಿಖೆಯಿಂದ ಬಯಲಾಗಬೇಕಿದೆ.