Monday, April 15, 2024
spot_img
More

  Latest Posts

  ಶನಿವಾರ ಚಂದ್ರಗ್ರಹಣ ಹಿನ್ನಲೆ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನದ ಸಮಯದಲ್ಲಿ ಬದಲಾವಣೆ

  ಕುಕ್ಕೆ : ಶನಿವಾರ ಚಂದ್ರಗ್ರಹಣ ಇರುವುದರಿಂದ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಬಗ್ಗೆ ಕಾರ್ಯನಿರ್ವಹಣಾಧಿಕಾರಿಯವರು ಆದೇಶವನ್ನು ಹೊರಡಿಸಿದ್ದಾರೆ.

  ಆದೇಶದಲ್ಲಿ ಅವರು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಸದರಿ ದಿನದಂದು ಭಕ್ತಾದಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆಯಾಗಲಿದ್ದು, ಶ್ರೀ ದೇವರ ದರ್ಶನ ಹಾಗೂ ಸೇವಾ ಸಮಯವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ. ಅಕ್ಟೋಬರ್​ 28ರ ರಾತ್ರಿ ಮಹಾಪೂಜೆಯು ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯವಾಗಲಿದೆ. ಶನಿವಾರದಂದು ಸಾಯಂಕಾಲ ಆಶ್ಲೇಷ ಬಲಿ ಸೇವೆಯು ಇರುವುದಿಲ್ಲ. ಈ ದಿನ ಸಾಯಂಕಾಲ ಗಂಟೆ 6.30ರ ನಂತರ ಶ್ರೀ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಾತ್ರವಲ್ಲದೆ ರಾತ್ರಿ ಪ್ರಸಾದ ಭೋಜನ ವ್ಯವಸ್ಥೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss