ಉಡುಪಿ:
ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಅಮ್ಮುಂಜೆ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಚ್ಚದಂತೆ ಕ್ರಮ ಕೈಗೊಳ್ಳುವಂತೆ ಹೋರಾಟ ನಡೆಸುತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯ ಶ್ಲಾಘನೀಯವಾಗಿದ್ದು, ಇದು ಕನ್ನಡ ಭಾಷೆ ಮತ್ತು ಕನ್ನಡ ಶಿಕ್ಷಣವನ್ನು ಉಳಿಸಿ ಬೆಳೆಸುವ ದಿಕ್ಕಿನಲ್ಲಿ ಕೈಗೊಂಡಿರುವ ಮಹತ್ವದ ಹೋರಾಟವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರು ಹೇಳಿದರು.
ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ, ಮಕ್ಕಳ ಭವಿಷ್ಯ ಹಾಗೂ ಕನ್ನಡ ಭಾಷೆಯ ಅಸ್ತಿತ್ವಕ್ಕಾಗಿ ಧ್ವನಿ ಎತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಸಮಾಜಕ್ಕೆ ದಿಕ್ಕು ತೋರಿಸುವಂತಿದೆ. ಶಿಕ್ಷಣವೇ ಭಾಷೆಯ ಜೀವಾಳವಾಗಿದ್ದು, ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ದೊರಕಬೇಕೆಂಬ ಉದ್ದೇಶದಿಂದ ಈ ಹೋರಾಟ ನಡೆಸುತ್ತಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.
ಕನ್ನಡವನ್ನು ಉಳಿಸಿ ಬೆಳೆಸುವ ಈ ಹೋರಾಟದಲ್ಲಿ ಕನ್ನಡ ಹಾಗೂ ತುಳು ಸಂಘಟನೆಗಳು ಒಂದೇ ಮನೋಭಾವದೊಂದಿಗೆ ಕೈಜೋಡಿಸುವುದು ಅತ್ಯಂತ ಅಗತ್ಯವಾಗಿದ್ದು, ಇಂತಹ ಹೋರಾಟಗಳು ಭಾಷಾ ಸಂಘಟನೆಗಳ ನಡುವೆ ಪ್ರೀತಿ–ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಮಾಡುತ್ತದೆ. ಭಾಷೆ, ಸಂಸ್ಕೃತಿ ಹಾಗೂ ಶಿಕ್ಷಣದ ರಕ್ಷಣೆಗೆ ಸಂಘಟನೆಗಳ ಒಗ್ಗಟ್ಟು ಅವಶ್ಯಕವೆಂದು ಸುಜಯ್ ಪೂಜಾರಿ ಅವರು ಹೇಳಿದರು.
ತುಳುನಾಡ ರಕ್ಷಣಾ ವೇದಿಕೆಯ ಈ ನಿಲುವಿಗೆ ಕರ್ನಾಟಕ ರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ನೀಡುವುದರ ಜೊತೆಗೆ, ಕನ್ನಡ ಶಾಲೆಗಳ ಉಳಿವಿಗಾಗಿ ಮುಂದಿನ ದಿನಗಳಲ್ಲಿ ಸಂಯುಕ್ತ ಹೋರಾಟಕ್ಕೆ ಸಿದ್ಧವಿರುವುದಾಗಿ ಅವರು ತಿಳಿಸಿದರು.
Trending
- ಯೂಟ್ಯೂಬರ್ ಅಖಿಲ್ ಎನ್ಆರ್ಡಿ ದಾಂಪತ್ಯದಲ್ಲಿ ಬಿರುಗಾಳಿ: ಪತ್ನಿ ಮೇಘಾ ನಾಪತ್ತೆ, ಸಾಮಾಜಿಕ ಜಾಲತಾಣಗಳಲ್ಲಿ ಹಲವು ಊಹಾಪೋಹ
- ಹಿರಿಯರ ಜೀವನ ಪದ್ಧತಿ, ಸಂಸ್ಕೃತಿ, ಸಂಪ್ರದಾಯ ಇಂದಿನ ಯುವಪೀಳಿಗೆಗೆ ಉಳಿಸಿ ಬೆಳೆಸಬೇಕಾಗಿದೆ: ಅರ್ಪಿತಾ ಪ್ರಶಾಂತ್ ಶೆಟ್ಟಿ
- ಮಂಗಳೂರು ಯಾತ್ರೆ ಮುಗಿಸಿ ಮರಳುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತದಿಂದ ನಿಧನ
- ತಂಬಾಕು
- ದೆಹಲಿಯಲ್ಲಿ ಸಂಭ್ರಮದ ಆಟಿ ಅಮಾವಾಸ್ಯೆ ಆಚರಣೆ,ತುಳುವರಿಂದ ಆಟಿ ಕಷಾಯ ಹಾಗೂ ಮೆಂತ್ಯ ಗಂಜಿ ವಿತರಣೆ
- ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ಪಾಲೆ ಕತ್ತೆ ಕಷಾಯ ವಿತರಣೆ,3 ಸಾವಿರಕ್ಕೂ ಅಧಿಕ ಮಂದಿ ಕಷಾಯ ಸೇವನೆ; 17 ವರ್ಷಗಳ ಪರಂಪರೆ ಮುಂದುವರಿಕೆ
- ಕೆನರಾ ಕಾಲೇಜಿನಲ್ಲಿ ಸಡಗರದಿಂದ ‘ಆಟಿಡೊಂಜಿ ದಿನ’ ಆಚರಣೆ ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಆಟಿ ತಿಂಗಳ ವೈಶಿಷ್ಟ್ಯ ಪರಿಚಯ
- ಆಚರಣೆಗಳನ್ನು ಸಾಮೂಹಿಕವಾಗಿ ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ವರ್ಗಾವಣೆ ಮಾಡಲು ಸಾಧ್ಯ- ಆಟಿ ಕಷಾಯ ಮತ್ತು ಗಂಜಿ ಹಂಚುವ ಕಾರ್ಯಕ್ರಮದಲ್ಲಿ ಡಾ ಅಣ್ಣಯ್ಯ ಕುಲಾಲ್ ಉಳ್ತೂರು.

