ಸುಳ್ಯ: ಜನತಾದಳ ಜಾತ್ಯತೀತ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಅವರು ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ ಅವರ ನಿವಾಸಕ್ಕೆ ಆಹ್ವಾನದ ಮೇರೆಗೆ ಗೌರವಯುತ ಸೌಹಾರ್ದ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪಕ್ಷ ಸಂಘಟನೆ ಬಲವರ್ಧನೆ, ಯುವಕರನ್ನು ಪಕ್ಷದತ್ತ ಸೆಳೆಯುವುದು ಹಾಗೂ ಗ್ರಾಮ ಮಟ್ಟದಲ್ಲಿ ಕಾರ್ಯಕರ್ತರನ್ನು ಇನ್ನಷ್ಟು ಸಕ್ರಿಯಗೊಳಿಸುವ ಕುರಿತು ಆತ್ಮೀಯ ಚರ್ಚೆ ನಡೆಯಿತು. ಪಕ್ಷದ ತತ್ವಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ನಾಯಕರು ಅಭಿಪ್ರಾಯಪಟ್ಟರು.
ಸುಕುಮಾರ್ ಕೋಡ್ತುಗುಳಿ ಅವರು ಕಾರ್ಯಕರ್ತರ ಏಕತೆ, ನಿಷ್ಠೆ ಹಾಗೂ ಸಮರ್ಪಣಾಭಾವವೇ ಪಕ್ಷದ ನಿಜವಾದ ಶಕ್ತಿಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿ ಜನತಾದಳ ಜಿಲ್ಲಾಧ್ಯಕ್ಷ ನಿಹಾಲ್ ಕೋಡ್ತುಗುಳಿ ಅವರು ಯುವಕರನ್ನು ಸಮಾಜಮುಖಿ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ಸೌಹಾರ್ದಯುತ ವಾತಾವರಣದಲ್ಲಿ ನಡೆದ ಈ ಭೇಟಿ ಹೊಸ ಉತ್ಸಾಹ ಮತ್ತು ಚೈತನ್ಯ ಮೂಡಿಸಿತು.

