ಸುಳ್ಯ:ನಾಲ್ಕು ವರ್ಷದ ಮಗುವನ್ನು ಎತ್ತಿಕೊಂಡು ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ತಾಯಿ ಮೃತಪಟ್ಟು ಮಗು ಬದುಕುಳಿದ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ.
ಘಟನೆಯಿಂದ ಮೃತಪಟ್ಟ ಮಹಿಳೆ ಅಗ್ನಿಶಾಮಕ ದಳದ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ ಎಂದು ತಿಳಿದುಬಂದಿದೆ.
ಗೀತಾರವರು ಸುಳ್ಯದ ಖಾಸಗಿ ಶಿಕ್ಷಣ ಸಂಸ್ಥೆ ಒಂದರಲ್ಲಿ ಗುಮಾಸ್ತೆಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಮುಂಜಾನೆ ತನ್ನ ನಾಲ್ಕು ವರ್ಷದ ಮಗಳು ಪೂರ್ವಿಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಜಾನೆ ಮನೆಯವರು ಎದ್ದಾಗ ಗೀತಾ ಮನೆಯಲ್ಲಿ ಇರದಿರುವುದನ್ನು ಕಂಡು ಹುಡುಕಾಡಿದಾಗ ಬಾವಿಯಲ್ಲಿ ಮಗಳು ಮತ್ತು ಪತ್ನಿ ಬಿದ್ದಿರುವುದು ಕಂಡುಬಂದಿದೆ. ಮಗಳು ಬಾವಿಯೊಳಗೆ ಇದ್ದ ಕಲ್ಲಿನ ಸಹಾಯದಿಂದ ಬದುಕುಳಿದಿದ್ದು ಆಕೆಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.