ಬೆಂಗಳೂರು : ವಂದೇ ಮಾತರಂ ಲಲಿತ ಕಲಾ ಅಕಾಡೆಮಿ (ರಿ.), ಬೆಂಗಳೂರು ಸಂಸ್ಥೆಯ ವತಿಯಿಂದ ಆಯೋಜಿಸಲಾದ “ಸಂಕ್ರಾಂತಿ ಸಂಭ್ರಮ 2026” ಕಾರ್ಯಕ್ರಮವು ಬೆಂಗಳೂರಿನ ನಯನ ಸಭಾಂಗಣದಲ್ಲಿ ಭವ್ಯವಾಗಿ ಜರುಗಿತು.
ಈ ಸಂದರ್ಭದಲ್ಲಿ ತುಳುನಾಡು ರಕ್ಷಣಾ ವೇದಿಕೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಸುನಂದ ಕೋಟ್ಯಾನ್ ಅವರಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಹಾಗೂ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರುನಾಡ ಕಾಯಕ ಯೋಗಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೆಸರಾಂತ ಚಲನಚಿತ್ರ ನಟರು ಹಾಗೂ ಮಾಜಿ ಸಚಿವರಾದ ಬಿ.ಸಿ. ಪಾಟೀಲ್, ವೃಂದಾ ಆಚಾರ್ಯ ಅವರ ನೇತೃತ್ವದ ವೀರೇಶ್ ಮುತ್ತಿನ ಮಠ, ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಲ್ಲದೆ ವಿವಿಧ ಕ್ಷೇತ್ರಗಳ ಗಣ್ಯರು, ಕಲಾವಿದರು, ಸಮಾಜ ಸೇವಕರು ಹಾಗೂ ಪ್ರೇಕ್ಷಕರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.
ಸುನಂದ ಕೋಟ್ಯಾನ್ ಅವರು ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ವಿಶೇಷವಾಗಿ ಮಹಿಳಾ ಸಬಲೀಕರಣ, ಸಾಮಾಜಿಕ ಜಾಗೃತಿ, ಸಾರ್ವಜನಿಕ ಸೇವೆ ಹಾಗೂ ಜನಪರ ಹೋರಾಟಗಳಲ್ಲಿ ಮಹತ್ವದ ಪಾತ್ರ ವಹಿಸಿಕೊಂಡಿದ್ದಾರೆ. ಅವರ ಈ ಸೇವಾಭಾವನೆ ಮತ್ತು ಸಮಾಜದ ಮೇಲಿನ ಅಪಾರ ಕಾಳಜಿಯನ್ನು ಗುರುತಿಸಿ ರಾಜ್ಯಮಟ್ಟದ ಈ ಗೌರವ ನೀಡಲಾಗಿದೆ.
ಗಣ್ಯ ಅತಿಥಿಗಳು ಮಾತನಾಡಿ, ಸುನಂದ ಕೋಟ್ಯಾನ್ ಅವರ ಸೇವಾ ಮನೋಭಾವವನ್ನು ಹೃದಯಪೂರ್ವಕವಾಗಿ ಪ್ರಶಂಸಿಸಿದರು. ಈ ಪ್ರಶಸ್ತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ಅವರಿಗೆ ಪ್ರೇರಣೆಯಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮವು ಸಂಕ್ರಾಂತಿ ಹಬ್ಬದ ಸಾಂಸ್ಕೃತಿಕ ವೈಭವ, ಕಲಾ ಪ್ರದರ್ಶನಗಳು ಹಾಗೂ ಸೌಹಾರ್ದ ವಾತಾವರಣದೊಂದಿಗೆ ಯಶಸ್ವಿಯಾಗಿ ಸಂಪನ್ನವಾಯಿತು.
ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾದ್ಯಕ್ಷ ಫ್ರಾಂಕಿ ಡಿಸೋಜ ಅಭಿನಂದಿಸಿದ್ದಾರೆ.

