ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಳಹಂತದ ಪೊಲೀಸ್ ಅಧಿಕಾರಿಗಳ ಬದಲಾವಣೆ ಆರಂಭವಾಗಿದೆ. ರಾಜ್ಯ ಸರಕಾರ ಹಲವು ಜಿಲ್ಲೆಗಳಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಮಂಗಳೂರಿನಲ್ಲಿ ಇತ್ತಿಚಿನ ಹಲವು ಕಹಿ ಘಟನೆಗಳ ನಂತರ ಪೊಲೀಸ್ ಕಮೀಷನರ್, ಜಿಲ್ಲಾ ಎಸ್ಪಿಯವರನ್ನು ವರ್ಗಾವಣೆಗೊಳಿಸಿ ಖಡಕ್ ಅಧಿಕಾರಿಗಳನ್ನು ನೇಮಿಸಿತ್ತು. ಇದೀಗ
ಸುರತ್ಕಲ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಮಹೇಶ್ ಪ್ರಸಾದ್ ಅವರು ಇನ್ಸ್ ಪೆಕ್ಟರ್ ಆಗಿದ್ದರು. ಸುರತ್ಕಲ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಸೂಪರ್ ಕಾಪ್, ದಕ್ಷ ಪೊಲೀಸ್ ಅಧಿಕಾರಿಯಾಗಿ ಜಿಲ್ಲೆ ಮತ್ತು ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜನಸಾಮಾನ್ಯರಿಗೆ ಪ್ರೀತಿ ಪಾತ್ರರಾಗಿದ್ದವರು ಅಂತಹ ದಕ್ಷ ಅಧಿಕಾರಿಗಳ ಅಗತ್ಯ ಮಂಗಳೂರು ನಗರಕ್ಕೆ ಬರಲಿ ಎಂದು ಮಂಗಳೂರಿನ ಹೆಚ್ಚಿನ ಜನರು ಆಶಿಸುತ್ತಿದ್ದರು.
