ಸುರತ್ಕಲ್: ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಹೊಸಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಹಳೆಯಂಗಡಿ ನಿವಾಸಿ ಮೊಹಮ್ಮದ್ ಶಾಹೀಲ್(20) ಮತ್ತು ಪಕ್ಷಿಕೆರೆಯ ಅರಾಫತ್(19) ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್, ಡಿವೈಡರ್ ಬಳಿ ರಸ್ತೆ ದಾಟಲು ಕಾಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಇ ಅವಘಡ ಸಂಭವಿಸಿದೆ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳು ಬಸ್ ಚಾಲಕನ ನಿರ್ಲಕ್ಷ್ಯವನ್ನು ಸ್ಪಷ್ಟವಾಗಿ ತೋರಿಸಿದೆ.
ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 279, 337, 338 ಮತ್ತು 184 ಎಂವಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
©2021 Tulunada Surya | Developed by CuriousLabs