ಸುರತ್ಕಲ್ : ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು ಗಾಯಗೊಂಡಿದ್ದ ಮಹಿಳೆಯರು ಸಾವನ್ನಪ್ಪಿದ ಘಟನೆ ಸುರತ್ಕಲ್ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ನಡೆದಿದೆ.
ಡಿ. 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು ಗಾಯಗೊಂಡಿದ್ದ ಪುಷ್ಪಾ ಶೆಟ್ಟಿ(72) ಹಾಗೂ ವಸಂತಿ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಡಿ.26ಗುರುವಾರ ಮೃತಪಟ್ಟಿದ್ದಾರೆ.
ಸುರತ್ಕಲ್ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿರುವ ಮನೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುಷ್ಪಾ ಹಾಗೂ ಮನೆ ಯಜಮಾನ ವಾಮನ ಅವರ ಪತ್ನಿ ವಸಂತಿ ಅವರಿಗೆ ಕಳೆದ 9 ದಿನಗಳಿಂದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಗಂಭೀರ ಗಾಯಗೊಂಡಿದ್ದ ಮಹಿಳೆಯರು ಮೃತಪಟ್ಟಿದ್ದಾರೆ.
ವಸಂತಿ ಅವರು ಗ್ಯಾಸ್ ಸೋರಿಕೆಯಾಗಿರುವುದನ್ನು ಗಮನಿಸದೆ ಮಧ್ಯಾಹ್ನ ಅಡುಗೆ ಕೋಣೆಗೆ ಹೋಗಿ ಸ್ಟವ್ಗೆ ಬೆಂಕಿ ಹಚ್ಚಿದ್ದರಿಂದ ದೊಡ್ಡ ಮಟ್ಟದ ಸ್ಫೋಟವಾಗಿ ಬೆಂಕಿ ಏಕಾಏಕಿ ವ್ಯಾಪಿಸಿಕೊಂಡಿತ್ತು. ವಸಂತಿ ಅವರು ಸಹಾಯಕ್ಕಾಗಿ ಕೂಗಿದಾಗ ಅವರನ್ನು ರಕ್ಷಿಸಲು ಹೋದ ಪುಷ್ಪಾ ಅವರಿಗೂ ಬೆಂಕಿ ಹೊತ್ತಿಕೊಂಡು ತೀವ್ರ ತರಹದ ಸುಟ್ಟ ಗಾಯಗಳಾಗಿತ್ತು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ.