ಮಂಗಳೂರು: ಜನತಾದಳ (ಜಾತ್ಯತೀತ) ರಾಜ್ಯ ನಾಯಕರೂ, ವಿಧಾನ ಪರಿಷತ್ ಸದಸ್ಯರೂ ಹಾಗೂ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರೂ ಆದ ಟಿ.ಎ. ಶರವಣ ಅವರು ಇಂದು ರಾತ್ರಿ 8.30 ಗಂಟೆಗೆ ಮಂಗಳೂರು ಅಂತರರಾಷ್ಟ್ರೀಯ (ಬಜ್ಪೆ) ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಹಾಗೂ ಪಕ್ಷದ ಪದಾಧಿಕಾರಿಗಳು ಅವರನ್ನು ಹೂ ಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿ, ಪಕ್ಷದ ಸಂಘಟನೆ ಹಾಗೂ ಜಿಲ್ಲೆಯ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಸಂಕ್ಷಿಪ್ತವಾಗಿ ಮಾತುಕತೆ ನಡೆಸಿದರು.
ಈ ವೇಳೆ ಜೆಡಿಎಸ್ ಕಾರ್ಯಾಧ್ಯಕ್ಷ ವಸಂತ್ ಪೂಜಾರಿ, ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು, ರಾಜ್ಯ ಮೀನುಗಾರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ, ಪ್ರಶಾಂತ್ ಭಟ್ ಕಡಬ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು



