ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಕೇರಳಿ ವಿದ್ಯಾರ್ಥಿಗಳು ಬರುವಾಗ ಅವರನ್ನು 72 ಗಂಟೆಗಳ ಆರ್ಟಿಪಿಸಿಆರ್ ಪರೀಕ್ಷೆಗೊಳಪಡಿಸಬೇಕು.
ನೆಗೆಟಿವ್ ವರದಿ ಹೊಂದಿರಬೇಕು. ಅಲ್ಲದೇ ಏಳು ದಿನಗಳ ಐಸೊಲೇಶನ್ ಮತ್ತು ಎಂಟನೇ ದಿನದ ಆರ್ಟಿಪಿಸಿಆರ್ ನೆಗೆಟಿವ್ ವರದಿ ಹೊಂದುವುದನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನಗರದ ಎಲ್ಲಾ ವೈದ್ಯಕೀಯ ಕಾಲೇಜುಗಳು, ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಎಲ್ಲಾ ಪ್ಯಾರಾ ಮೆಡಿಕಲ್ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ.
©2021 Tulunada Surya | Developed by CuriousLabs