Friday, March 29, 2024
spot_img
More

    Latest Posts

    ತಮಿಳುನಾಡಿನಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ; ರೆಡ್ ಅಲರ್ಟ್ ಘೋಷಣೆ

    ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾನುವಾರ ತಮಿಳುನಾಡಿನ 38 ಜಿಲ್ಲೆಗಳ ಪೈಕಿ 36 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

    ರಾಜಧಾನಿ ಚೆನ್ನೈನಲ್ಲಿ 24 ಗಂಟೆಗಳಲ್ಲಿ 134.29 ಮಿಮೀ ರಷ್ಟು ಅತೀ ಹೆಚ್ಚು ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಗರದ ಹಲವಾರು ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿರುವ ಮನೆಗಳು ನೀರಿನಲ್ಲಿ ಮುಳುಗಡೆಗೊಂಡಿದೆ. ಅಲ್ಲದೇ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲು ಮೂರು ಜಲಾಶಯಗಳ ಗೇಟ್‍ಗಳನ್ನು ತೆರೆಯಲಾಗಿದೆ.

    ಪ್ರಧಾನಿ ನರೇಂದ್ರ ಮೋದಿ ಅವರು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಕರೆ ಮಾಡಿ ರಾಜ್ಯದ ಪರಿಸ್ಥಿತಿ ಸಂವಹನ ನಡೆಸಿದ್ದು, ರಕ್ಷಣಾ ಮತ್ತು ಪರಿಹಾರ ಕುರಿತಂತೆ ಕೇಂದ್ರದಿಂದ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಇಲ್ಲಿಯವರೆಗೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‍ಡಿಆರ್‍ಎಫ್) ನಾಲ್ಕು ತಂಡಗಳನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ.

    ಧಾರಾಕಾರ ಮಳೆಯಿಂದಾಗಿ ತಮಿಳುನಾಡಿನ ಮೂರು ಜಿಲ್ಲೆಗಳಲ್ಲಿ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಚೆನ್ನೈ ನಗರದ ರೈಲು ಸಂಚಾರ ಅಸ್ತವ್ಯಸ್ಥಗೊಂಡಿದೆ. ಇನ್ನೂ 2 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮತ್ತೊಂದೆಡೆ ಇಂದು ಮುಂಜಾನೆಯಿಂದ ಬೆಂಗಳೂರಿನಲ್ಲಿ ದಟ್ಟಮಂಜು ಕವಿದ ವಾತಾವರಣವಿದ್ದು, ಜಿಟಿಜಿಟಿ ಮಳೆಯಾಗುತ್ತಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss