ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿ ಘಟನೆ ಮಾಸುವ ಮುನ್ನವೇ ಮಂಡ್ಯ ಜಿಲ್ಲೆಯಲ್ಲಿ ಕಾಮುಕ ಶಿಕ್ಷಕನಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ.
ಮಂಡ್ಯ ತಾಲೂಕಿನ ಬೇಬಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದ್ದು, ಕಾಮುಕ ಶಿಕ್ಷಕನ ವರ್ತನೆಗೆ ಬೇಸತ್ತ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.
ವಿದ್ಯಾರ್ಥಿನಿಯರ ಆರೋಪದ ಬೆನ್ನಲ್ಲೇ ಶಿಕ್ಷಣ ಇಲಾಕೆ ಎಸ್ ಡಿಎಂಸಿ ಸಭೆ ಆಯೋಜನೆ ಮಾಡಲಾಗಿದ್ದು, ಸಭೆಯಲ್ಲಿ ಶಿಕ್ಷಕನ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕನ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಸೌಭಗ್ಯ ಭೇಟಿ ನೀಡಿದ್ದಾರೆ. ಆರೋಪಿ ಶಿಕ್ಷಕನನ್ನು ಅಮಾನತುಗೊಳಿಸುವಂತೆ ಪೋಷಕರು ಪಟ್ಟು ಹಿಡಿದಿದ್ದಾರೆ.