ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪರೀಕ್ಷಾ ಕೇಂದ್ರಗಳಲ್ಲಿ 2022ರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯು ನಡೆಯಲಿರುವ ಕಾರಣ ಮೇ. 21 ಹಾಗೂ 22ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಮಧ್ಯಾಹ್ನ 2. 30 ರಿಂದ ಸಂಜೆ 5. 30ರವರೆಗೆ ಪರೀಕ್ಷಾ ಕೇಂದ್ರದ 200 ಮೀಟರ್ ಅಂತರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿ. ಆರ್. ಪಿ. ಸಿ 144ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

