Tuesday, July 16, 2024
spot_img
More

    Latest Posts

    ಲೋಕಾಯುಕ್ತ ದಾಳಿ, ಕೆ.ಆರ್.ಪುರಂ ತಹಶೀಲ್ದಾರ್ ‘ಅಜಿತ್ ರೈ’ ಬಂಧನ

    ಬೆಂಗಳೂರು: ಅಕ್ರಮ ಆಸ್ತಿ ಆರೋಪಕ್ಕೆ ಸಂಬಂಧಪಟ್ಟಂತೆ ಕೆ.ಆರ್.ಪುರಂ ತಹಶೀಲ್ದಾರ್ ‘ಅಜಿತ್ ರೈ’ ಬಂಧನ ಮಾಡಲಾಗಿದೆ .

    ತಹಶೀಲ್ದಾರ್​ ಅಜಿತ್ ರೈ ಮನೆ ಮೇಲೆ ನಿನ್ನೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದ ಲೋಕಾಯುಕ್ತ ಪೊಲೀಸರು ಇಂದು ಕೂಡ ಅವರ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದರು.

    ಹೆಚ್ಚಿನ ವಿಚಾರಣೆಗಾಗಿ ಅವರನ್ನು ಲೋಕಾಯುಕ್ತ ಪೋಲಿಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಜಿತ್​ ರೈಗೆ ಸಂಬಂಧಿಸಿದ 10 ಕಡೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 1.90 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದು, . ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಸೇರಿದಂತೆ ಇತರೆ ಕಡೆಗಳಲ್ಲಿ ಬೇನಾಮಿ ಹೆಸರಿನಲ್ಲಿ ಅವರು ಆಸ್ತಿಯನ್ನು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
    ಈ ಹಿಂದೆ ಕೂಡ ಅಜಿತ್‌ ಅವರ ವಿರುದ್ದ ಅಕ್ರಮ ಆಸ್ತಿ ಆರೋಪ ಕೇಳಿ ಬಂದಿತ್ತು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss