ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೀನಿನ ಟೆಂಪೊ: ಚಾಲಕನಿಗೆ ಗಾಯ!
ಪಡುಬಿದ್ರಿ: ಪಡುಬಿದ್ರಿ ಪೆಟ್ರೋಲ್ ಬಂಕ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋವೊಂದು ಪಲ್ಟಿಯಾದ ಘಟನೆ ಸಂಭವಿಸಿದೆ. ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೀನಿನ ಗೊಬ್ಬರ ಸಾಗಿಸುವ ಟೆಂಪೋ ಇದಾಗಿದ್ದು ಟೆಂಪೋ ಪಲ್ಟಿಯಾದ ಪರಿಣಾಮ ಅದರೊಳಗಿದ್ದ ಮೀನಿನ ಗೊಬ್ಬರದ ಬಾಕ್ಸ್ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದವು. ಇದರಿಂದಾಗಿ ಕೆಲ ಹೊತ್ತು ರಸ್ತೆ ಸಂಚಾರಕ್ಕೆ ತೊಡಕುಂಟಾಯಿತು. ಟೆಂಪೋ ಮಲ್ಪೆಯಿಂದ ಮಂಗಳೂರು ಕಡೆಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದಾಗ ಈ ಘಟನೆ ಸಂಭವಿಸಿದ್ದು ಪೊಲೀಸರು ಆಗಮಿಸಿ ರಸ್ತೆ ಸಂಚಾರ ಸುಗಮಗೊಳಿಸಿದರು.
