ಬೆಳ್ತಂಗಡಿ: ಲಾರಿಯೊಂದು 2 ಬಸ್ಸು ಸೇರಿದಂತೆ ಇತರ 5 ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತಿದ್ದ ಯುವತಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಉಜಿರೆ ಕಡೆಯಿಂದ ಮರಳು ತುಂಬಿದ ಲಾರಿ ಬೆಳ್ತಂಗಡಿ ಸೇತುವೆ ಬಳಿ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರು ರಿಕ್ಷಾ ಸೇರಿದಂತೆ ನಡೆದುಕೊಂಡು ಹೋಗುತಿದ್ದ ಯುವತಿಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.