ಮಂಗಳೂರು: ಕಾಮಗಾರಿ ಬಿಲ್ ಮಂಜೂರು ಮಾಡಲು 3 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಮಂಗಳೂರು ಮನಪಾ ಕಾರ್ಯಪಾಲಕ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ನಗರದ ಮಂದಾರಬೈಲಿನ ಜಯಲಿಂಗಪ್ಪ ಎಂಬವರು ಲಂಚ ಸ್ವೀಕಾರದ ಬಗ್ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ರೈಡ್ ಮಾಡಿ ಮಂಗಳೂರು ಮನಪಾ ಕಾರ್ಯಪಾಲಕ ಇಂಜಿನಿಯರ್ ಅತೀಕ್ ರೆಹಮಾನ್ ನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದೆ. ಇದೀಗ ಆರೋಪಿಯನ್ನು ವಶಕ್ಕೆ ತೆಗೆದುಕೊಂಡ ಎಸಿಬಿ ಅಧಿಕಾರಿಗಳು ಆತನನ್ನು ವಿಚಾರಣೆ ನಡೆಸುತ್ತಿದೆ.
ಎಸಿಬಿ ಪಶ್ಚಿಮ ವಲಯದ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ಮಾರ್ಗದರ್ಶನದಲ್ಲಿ ಎಸಿಬಿ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಕೆ.ಸಿ.ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಗುರುರಾಜ್, ಶ್ಯಾಮ್ ಸುಂದರ್ ಹೆಚ್ ಎಂ ಹಾಗೂ ಸಿಬ್ಬಂದಿಯಾದ ಹರಿಪ್ರಸಾದ್, ರಾಧಾಕೃಷ್ಣ ಕೆ,ರಾಧಾಕೃಷ್ಣ ಡಿ.ಎ, ಉಮೇಶ್, ವೈಶಾಲಿ, ಗಂಗಣ್ಣ, ಆದರ್ಶ, ರಾಕೇಶ್, ಭರತ್, ಮೋಹನ್ ಸಾಲಿಯಾನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

