ಬೆಂಗಳೂರು: 2022-23 ನೇ ಸಾಲಿನ ತರಗತಿಗಳು ಪ್ರಾರಂಭದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೇ 16 ರಂದು ನಿಗದಿತ ವೇಳಾಪಟ್ಟಿಯಂತೆ ಪ್ರಾರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯದ ಕೆಲವೆಡೆ ಏರುತ್ತಿರುವ ತಾಪಮಾನವು ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ವೇಳಾಪಟ್ಟಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶೈಕ್ಷಣಿಕ ವರ್ಷದ ಆರಂಭವನ್ನು ವಿಳಂಬಗೊಳಿಸುವಂತೆ ಸರ್ಕಾರಕ್ಕೆ ಯಾವುದೇ ಮನವಿಗಳು ಬಂದಿಲ್ಲ. ಹೀಗಾಗಿ 2022-23 ನೇ ಸಾಲಿನ ತರಗತಿಗಳು ಮೇ 16 ರಂದು ನಿಗದಿತ ವೇಳಾಪಟ್ಟಿಯಂತೆ ಪ್ರಾರಂಭವಾಗಲಿವೆ. ಅದರಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ, ಹವಾಮಾನ ಇಲಾಖೆಯೂ ತಾಪಮಾನ ಏರಿಕೆಯ ಬಗ್ಗೆ ಯಾವುದೇ ಮುನ್ಸೂಚನೆ ನೀಡಿಲ್ಲ ಎಂದಿದ್ದಾರೆ
ಕೊವೀಡ್ ಸಾಂಕ್ರಮಿಕ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಕಲಿಕಾ ಮಟ್ಟದಲ್ಲಿನ ನಷ್ಟವನ್ನು ಸರಿದೂಗಿಸಲು ಇಲಾಖೆ ಈ ಬಾರಿಯ ಬೇಸಿಗೆ ರಜಾದಿನಗಳನ್ನು 15 ದಿನಗಳವರೆಗೆ ಕಡಿತಗೊಳಿಸಿದೆ.

