Thursday, April 18, 2024
spot_img
More

    Latest Posts

    ಬಂಟ್ವಾಳ: ಬೈಕ್ ಕಳವು ಪ್ರಕರಣ-ಮೂವರ ಬಂಧನ

    ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಸ್ಥಳದಲ್ಲಿ ನಡೆದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಕುವೆಟ್ಟು ಗ್ರಾಮ ಸಬರಬೈಲು ನಿವಾಸಿ ಅಬೂಬ್ಬಕ್ಕರ್ ಸಿದ್ದಿಕ್ , ನರಿಕೊಂಬು ಗ್ರಾಮದ ನೆಹರೂ ನಗರ ನಿವಾಸಿ ಅಕ್ಬರ್ ಹಾಗೂ , ಮಾಲಾಡಿ ಗ್ರಾಮದ ಉರ್ಕೆದಬೈಲು ಮನೆಯ ಮೊಹಮ್ಮದ್ ಸಮೀರ್ ಬಂಧಿತ ಆರೋಪಿಗಳು.ಬಂಟ್ವಾಳ ಸಮೀಪದ ಮಣಿಹಳ್ಳದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೈಕ್ ಹಾಗೂ ಬಿ.ಸಿ ರೋಡ್ ರೈಲ್ವೇ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಗಳನ್ನು ಆರೋಪಿಗಳು ಕಳವು ಮಾಡಿದ್ದರು.ಆರೋಪಿಗಳಿಂದ ಕಳವಾದ 2 ಬೈಕ್ ಗಳನ್ನು ಸೇರಿದಂತೆ ಕೃತ್ಯಕ್ಕೆ ಬಳಸಲಾದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸ್ ಇನ್ಸ್ ಸ್ಪೆಕ್ಟರ್ ವಿವೇಕಾನಂದ ನೇತೃತ್ವದ ತಂಡ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss