ಬ್ರಹ್ಮಾವರ: ಮೂರು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದು ಓರ್ವ ಯುವಕ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾಣದ ಅಂಗನವಾಡಿ ಸಮೀಪ ನಡೆದಿದೆ. ಮೃತಪಟ್ಟ ಯುವಕ ಪಾರಂಪಳ್ಳಿಯ ರವಿಯಾನೆ ರವೀಂದ್ರ ಪೂಜಾರಿ(30) ಎಂದು ಗುರುತಿಸಲಾಗಿದೆ. ಕೋಡಿ ಕನ್ಯಾಣದಿಂದ ಪಾರಂಪಳ್ಳಿಗೆ ಹೋಗುತ್ತಿದ್ದ ಎರಡು ಬೈಕ್ ಗಳು ಪಾರಂಪಳ್ಳಿಯಿಂದ ಬರುತ್ತಿದ್ದ ಬೈಕ್ ಗೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಲ್ಲದೆ ಅಪಘಾತ ನಡೆದ ಸ್ಥಳದ ವಿರುದ್ದ ದಿಕ್ಕಿನಲ್ಲಿ ಯಾವುದೇ ಪಾರ್ಕಿಂಗ್ ಸಿಗ್ನಲ್ ಇಲ್ಲದೆ ರಸ್ತೆ ಬದಿಯಲ್ಲಿ ಕಾರೊಂದು ಪಾರ್ಕಿಂಗ್ ಮಾಡಿದ್ದು ಬೈಕ್ ಸವಾರರಿಗೆ ಮುಂದೆ ಬರುತ್ತಿದ್ದ ಬೈಕ್ ಕಾಣಿಸದೆ ಇರುವುದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಅಪಘಾತದ ತೀವ್ರತೆಗೆ ಬೈಕ್ ಮುಖಾಮುಖಿ ಡಿಕ್ಕಿಯಾಗಿ ನಿಂತ ಕಾರಿಗೆ ಅಪ್ಪಳಿಸಿ ಬೈಕ್ ಸವಾರರು ಗಂಭೀರ ಗಾಯಗೊಂಡಿರುತ್ತಾರೆ. ಮೃತ ಯುವಕ ಟೂ-ವೀಲರ್ ಮೆಕ್ಯಾನಿಕ್ ಆಗಿರುತ್ತಾನೆ. ಗಂಭೀರ ಗಾಯಗೊಂಡ ಸ್ಥಳೀಯ ಚರಣ್ ಹಾಗೂ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಕೋಟ ಎಸ್ಐ ಸುಧಾ ಪ್ರಭು ಹಾಗೂ ಸಿಬ್ಬಂದಿಗಳಾದ ರಾಘವೇಂದ್ರ ಶೆಟ್ಟಿ, ಮೋಹನ್ ಕೊತ್ವಲ್, ಸಂತೋಷ್, ರಾಜೇಶ್ ಸೇರಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
©2021 Tulunada Surya | Developed by CuriousLabs