Saturday, July 27, 2024
spot_img
More

    Latest Posts

    ಮೂರು NIA ಕೋರ್ಟ್‌ ಸ್ಥಾಪಿಸಲು ಹೈಕೋರ್ಟ್‌ ಸೂಚನೆ

    ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣಗಳ ಶೀಘ್ರ ವಿಚಾರಣೆ ಮತ್ತು ವಿಲೇವಾರಿಗೆ ಮೈಸೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ 6 ತಿಂಗಳೊಳಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಶಿಫಾರಸು ಮಾಡಿದೆಹುಬ್ಬಳ್ಳಿ ಪೊಲೀಸ್‌ ಠಾಣೆ ಮುಂದೆ ನಡೆದ ಗಲಭೆ ಕೇಸ್‌ನ ತೀರ್ಪು ನೀಡುವ ವೇಳೆ ಈ ಶಿಫಾರಸು ಮಾಡಿದೆ. ಒಂದುವೇಳೆ ಈ ವಿಶೇಷ ಕೋರ್ಟ್‌ ಸ್ಥಾಪನೆಯಾಗದಿದ್ದರೆ ರಾಜ್ಯದ ಏಕೈಕ ನ್ಯಾಯಾಲಯದ ಮೇಲೆ ಒತ್ತಡ ಹೆಚ್ಚಲಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣಗಳ ವಿಲೇವಾರಿ ವಿಳಂಬವಾಗಲಿದೆ ಎಂದು ಕೋರ್ಟ್‌ ತಿಳಿಸಿದೆ.ಹುಬ್ಬಳ್ಳಿ ಗಲಭೆ ಕೇಸ್​ನಲ್ಲಿ ಜಾಮೀನು ನಿರಾಕರಿಸಿದ್ದ ಎನ್‌ಐಎ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ಕುರಿತ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್​ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಮತ್ತು ಟಿ ವೆಂಕಟೇಶ್ ನಾಯಕ್ ನೇತೃತ್ವದ ನ್ಯಾಯಪೀಠ, ಎನ್ಐಎ ಪ್ರಕರಣಗಳ ವಿಚಾರಣೆಗೆ 6 ತಿಂಗಳ ಮೂರು ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಆದೇಶಿಸಿದೆ. ಅಲ್ಲದೇ, ಎನ್‌ಐಎ ವಿಶೇಷ ನ್ಯಾಯಾಲಯದ​​ ಜಾಮೀನು ನಿರಾಕರಣೆ ಆದೇಶವನ್ನು ಎತ್ತಿಹಿಡಿದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss