ಬೆಳ್ತಂಗಡಿ: ಮುಂಡಾಜೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಘಟನೆ ಸಂಭವಿಸಿದೆ.
ಚಾರ್ಮಾಡಿಯಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿನ ಟಯರ್ ಒಡೆದು ನಿಯಂತ್ರಣ ಕಳೆದುಕೊಂಡು ಉಜಿರೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಹೊಡೆತದ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿದೆ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
