Thursday, October 10, 2024
spot_img
More

    Latest Posts

    ಉಡುಪಿ: ಪ್ರವಾಸೋದ್ಯಮ ಚಟುವಟಿಕೆಗಳಿಗೆ ನೋಂದಣಿ ಕಡ್ಡಾಯ

    ಉಡುಪಿ: ಪ್ರವಾಸೋದ್ಯಮ ಚಟುವಟಿಕೆ ನಡೆಸುತ್ತಿರುವವರು ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಹೋಮ್ ಸ್ಟೇ, ಹೊಟೇಲ್/ರೆಸಾರ್ಟ್, ರೆಸ್ಟೋರೆಂಟ್, ಟ್ರಾವೆಲ್ ಏಜೆಂಟ್ಸ್, ಟೂರ್ ಆಪರೇಟರ್ ಟೂರಿಸ್ಟ್ ಟ್ರಾನ್ಸ್‌ಪೋರ್ಟ್ ಆಪರೇಟರ್, ಅಮ್ಯೂಸಮೆಂಟ್ ಪಾರ್ಕ್, ಕ್ಯಾರವನ್ ಟೂರಿಸಂ ಚಟುವಟಿಕೆಗಳನ್ನು ನಡೆಸುವವರು ಹಾಗೂ ಈಗಾಗಲೇ ನಡೆಸುತ್ತಿರುವವರು ಕಡ್ಡಾಯವಾಗಿ https://kttf.karnatakatourism.org/ ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಟೂರಿಸ್ಟ್ ಬೋಟಿಂಗ್, ಜಲಸಾಹಸ ಕ್ರೀಡೆಗಳು, ಭೂ ಸಾಹಸ ಕ್ರೀಡೆಗಳು ಮತ್ತು ವಾಯು ಸಾಹಸ ಕ್ರೀಡೆಗಳು ಸೇರಿ ಯಾವುದೇ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸಲು ಇಲಾಖೆ ಅನುಮೋದನೆ ನೀಡುತ್ತದೆ. ಅನುಮೋದನೆ ಪಡೆಯದೇ/ನೋಂದಣಿ ಮಾಡಿಸದೇ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಇಲಾಖೆಯ ಗಮನಕ್ಕೆ ಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ: 0820-2574868 ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss