ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 11 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಜನೀಶ್ ಗೋಯಲ್ ಗೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ಐಎಸ್‌ಎನ್ ಪ್ರಸಾದ್ ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಉಮಾಶಂಕರ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ವರ್ಗಾವಣೆಗೊಂಡ 11 ಮಂದಿ ಐಎಎಸ್ ಅಧಿಕಾರಿಗಳು
ರಜನೀಶ್ ಗೋಯಲ್- ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ
ಐಎಸ್‌ಎನ್ ಪ್ರಸಾದ್- ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿ
ಉಮಾಶಂಕರ್ -ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ
ರಶ್ಮಿ ವಿ.ಮಹೇಶ್-ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ
ಪಂಕಜ್ ಕುಮಾರ್ ಪಾಂಡೆ-ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ
ರಾಮ್ ಪ್ರಸಾದ್ ಮನೋಹರ್-ಬಿಬಿಎಂಪಿ ವಿಶೇಷ ಆಯುಕ್ತ
ವಿನೋಥ್ ಪ್ರಿಯಾ-ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಎಂ.ಡಿ
ರಮೇಶ್ ಡಿ.ಎಸ್- ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ನಿರ್ದೇಶಕ
ಶರತ್ ಬಿ-ಕೃಷಿ ಇಲಾಖೆಯ ಆಯುಕ್ತ
ಸತ್ಯಭಾಮ-ಅತಿಸಣ್ಣ, ಸಣ್ಣ, ಮಧ್ಯಮ ಉದ್ಯ, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ
ಸೋಮಶೇಖರ್ ಎಸ್.ಜೆ-ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಎಂ.ಡಿ.ಯಾಗಿ ವರ್ಗಾವಣೆ ಮಾಡಲಾಗಿದೆ.

