ಉಡುಪಿ:
ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ಮಹತ್ವದ ಸಭೆಯು ದಿನಾಂಕ 01-02-2026 ರಂದು ಉಡುಪಿ ಜಿಲ್ಲಾ ಕಚೇರಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪುರವರ ಅದ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಸಂಘಟನೆಯ ಉಡುಪಿ ಜಿಲ್ಲೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮಹಿಳಾ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ನೂತನ ಸದಸ್ಯರಾಗಿ ಮಹೇಶ್ ಪೂಜಾರಿ ಕೊಳಲಗಿರಿ, ನಾಗೇಶ್ ಭಂಡಾರಿ ಹಾವಂಜೆ , ಸುಮಿತ್ರ ಮದ್ವನಗರ ಮತ್ತಿತರ ಪ್ರಮುಖರು ಸೇರ್ಪಡೆಗೊಂಡರು.
ಸಭೆಯಲ್ಲಿ ತುಳುನಾಡದ ಭಾಷೆ, ಸಂಸ್ಕೃತಿ, ಜಾನಪದ ಪರಂಪರೆ ಹಾಗೂ ಜನಪರ ಸಮಸ್ಯೆಗಳ ಕುರಿತು ಸವಿಸ್ತಾರ ಚರ್ಚೆ ನಡೆಯಿತು. ಸಂಘಟನೆಯ ಬಲವರ್ಧನೆ, ಗ್ರಾಮ–ಗ್ರಾಮಗಳಲ್ಲಿ ಘಟಕಗಳ ರಚನೆ, ಯುವಕರ ಹಾಗೂ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಸಾಮಾಜಿಕ ಹೋರಾಟಗಳು ಹಾಗೂ ಕಾರ್ಯಕ್ರಮಗಳ ಕುರಿತು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಧ್ಯೇಯ–ಉದ್ದೇಶಗಳನ್ನು ಕಾರ್ಯಕರ್ತರಿಗೆ ವಿವರಿಸಲಾಯಿತು. ತುಳುನಾಡದ ಅಸ್ತಿತ್ವ, ಹಕ್ಕುಗಳು ಹಾಗೂ ಸಂಸ್ಕೃತಿಯ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯವೆಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಸಭೆಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ತುಳುನಾಡದ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಜೊತೆಗೆ ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ವಿವಿಧ ಜನಪರ ಕಾರ್ಯಕ್ರಮಗಳು, ಜಾಗೃತಿ ಸಭೆಗಳು ಹಾಗೂ ಸಂಘಟನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ನಿರ್ಧಾರವನ್ನು ಸಭೆ ಕೈಗೊಂಡಿತು. ಸಭೆಯಲ್ಲಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಜಯರಾಮ ಪೂಜಾರಿ, ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಮಮತಾ ಅಮೀನ್, ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರೀತಂ ಡಿ’ ಕೋಸ್ಟಾ, ತುರವೇ ಮುಖಂಡರಾದ ರೋಷನ್ ಡಿಸೋಜ, ಶಂಕರ್ ಉಡುಪಿ, ಜಿಲ್ಲಾ ಮಹಿಳಾ ಉಪಾಧ್ಯಕ್ಷರುಗಳಾದ ಜ್ಯೋತಿ ಆರ್, ಹರಿಣಾಕ್ಷಿ , ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಮತಾ ಉಡುಪಿ, ಮಹಿಳಾ ಮುಖಂಡರುಗಳಾದ ಧನವಂತಿ, ರಾಜೇಶ್ವರಿ, ಸೌಮ್ಯ ಮಲ್ಪೆ , ಅಶ್ವಿನಿ ಮತ್ತಿತರರು ಉಪಸ್ಥಿತರಿದ್ದರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ ಕಾರ್ಯಕ್ರಮ ನಿರೂಪಣೆ ಗೈದರು.
ಸಭೆಯ ಅಂತ್ಯದಲ್ಲಿ ಭಾಗವಹಿಸಿದ ಎಲ್ಲ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಲಾಯಿತು.





