Thursday, October 31, 2024
spot_img
More

    Latest Posts

    ಕಡಬ: ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ಭೀಕರ ಅಪಘಾತ

    ಕಡಬ:ಆಲ್ಟೋ ಕಾರು ಮತ್ತು ತೂಫಾನ್ ವಾಹನದ ನಡುವೆ ಭೀಕರ ಅಪಘಾತವುಂಟಾಗಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಇದೀಗ ಸಂಭವಿಸಿರುವುದಾಗಿ ವರದಿಯಾಗಿದೆ.

    ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.ಕಾರು ಮತ್ತು ತೂಫಾನ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆದಿದೆ.ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ನಿರೀಕ್ಷಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss