ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್ ಇವರ ನೇತೃತ್ವದಲ್ಲಿ ಕೋಡಿಕಲ್ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

ಇದರ ಉದ್ಘಾಟನೆಯನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್, ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು, ಅಶ್ವಥ್, ಕಿರಣ್ ತುಳುವೆ, ಪ್ರತೀಕ್ ಪೂಜಾರಿ, ಜೈ ತುಳುನಾಡು ಸಂಘಟನೆ, ತುಳುವೆರೆ ಕುಡ್ಲ ಸಂಘಟನೆ, ತುಳುನಾಡ ರಕ್ಷಣಾ ವೇದಿಕೆ ಹಾಗೂ ಮತ್ತಿತರ ತುಳು ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
