ಮಂಗಳೂರು : ಜನವರಿ 30ರಂದು ನಾಗಾಲ್ಯಾಂಡ್ ನಲ್ಲಿ ಹೃದಯಘಾತದಿಂದ ನಿಧನ ಹೊಂದಿದ ಟೈಮ್ಸ್ ಆಫ್ ಕುಡ್ಲ ತುಳು ಪತ್ರಿಕೆಯ ಸಂಪಾದಕರು ಆಗಿದ್ದು ತುಳು ಭಾಷೆ ಸಾಹಿತ್ಯ ಸಂಸ್ಕೃತಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿ ಹಲವು ಜನರಿಗೆ ಉದ್ಯೋಗದಾತರಾಗಿ ಸೇವೆ ಸಲ್ಲಿಸುತ್ತಿದ್ದ ದಿವಂಗತ ಶಶಿ.ಆರ್. ಬಂಡಿಮಾರ್ ರವರಿಗೆ ಫೆಬ್ರವರಿ 07 ಶುಕ್ರವಾರ ಸಂಜೆ 3:30ಕ್ಕೆ ಮಂಗಳೂರಿನ ಊರ್ವಸ್ಟೋರ್ ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಭಾಂಗಣ ತುಳು ಭವನದಲ್ಲಿ ಶ್ರದ್ದಾಂಜಲಿ ಸಭೆ ಹಮ್ಮಿಕೊಳ್ಳಲಾಗಿದೆ.
