Sunday, November 3, 2024
spot_img
More

    Latest Posts

    ಮಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಅರೆಸ್ಟ್

    ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಭಾಗಿಯಾಗಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೂಡಬಿದಿರೆಯ ಗಂಟಲ್ಕಟ್ಟೆ ನಿವಾಸಿ ರಾಜೇಶ್ ಅಲಿಯಾಸ್ ಜಗದೀಶ್ ಪೂಜಾರಿ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು. ಆದ್ದರಿಂದ ರಾಜೇಶ್ ನನ್ನು ಮೈಸೂರು ನಂಜನಗೂಡು ಎಂಬಲ್ಲಿಂದ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿದ್ದಾರೆ. ಇದೀಗ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ. ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣದಲ್ಲಿ ಭಾಗಿಯಾಗಿ ಬಳಿಕ ಪೊಲೀಸರ ಕೈಗೆ ಸಿಗದೆ ವಿದೇಶಕ್ಕೆ ಪರಾರಿಯಾಗಿದ್ದ ಆರೋಪಿ ಬೋಳಾರ ಅರೇಕೆರೆಬೈಲ್‌ ನಿವಾಸು ಅಭಿಜಿತ್ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆ.23ರಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss