Tuesday, July 16, 2024
spot_img
More

  Latest Posts

  ರಾಜ್ಯದಲ್ಲಿ ವರುಣಾರ್ಭಟಕ್ಕೆ ಮನೆ ಗೋಡೆ ಕುಸಿದು ಇಬ್ಬರು ಮಕ್ಕಳ ಸಾವು

  ಹಾವೇರಿ/ದಾವಣಗೆರೆ : ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಹಲವಡೆ ಜನಜೀವನ ಅಸ್ತವ್ಯಸ್ಥವಾಗಿದ್ದು, ಮಳೆಯಿಂದಾಗಿ ಎರಡು ಪ್ರತ್ಯೇಕ ಕಡೆಗಳಲ್ಲಿ ಮನೆಗೋಡೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.

  ನಿರಂತರ ಮಳೆಯಿಂದಾಗಿ ಮನೆ ಕುಸಿದು ಬಿದ್ದು, ಒಂದು ವರ್ಷದ ಕಂದಮ್ಮ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ.

  ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರಿ ಮಳೆಯಿಂದಾಗಿ ಮನೆ ಸಂಪೂರ್ಣ ಹಾನಿಯಾಗಿತ್ತು. ಇದೀಗ ಮನೆ ಏಕಾಏಕಿ ಕುಸಿದು ಬಿದ್ದಿದ್ದು, ದುರಂತದಲ್ಲಿ ಒಂದು ವರ್ಷದ ಮಗು ಸ್ಫೂರ್ತಿ ಸಾವನ್ನಪ್ಪಿದ್ದಾಳೆ. ಸ್ಫೂರ್ತಿಯ ತಂದೆ ಕೆಂಚಪ್ಪಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

  ಹಾವೇರಿ ಜಿಲ್ಲೆಯ ಮಾಳಾಪುರದಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಭಾಗ್ಯ ಚಳಮರದ ಎಂದು ಗುರುತಿಸಲಾಗಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss