ಬೆಳ್ತಂಗಡಿ: ಚಿಕ್ಕಮಗಳೂರಿನಲ್ಲಿ ಸರಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಬೆಳ್ತಂಗಡಿಯ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ತುಂಬೆತ್ತಡ್ಕ ನಿವಾಸಿ ಚನ್ನಕೇಶವ (28) ಮೃತ ಯುವಕ.ಚನ್ನಕೇಶವ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎಕ್ಸ್ ರೇ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ರಜೆ ಇದ್ದ ಕಾರಣ ಅಜ್ಜಿಯ ಮನೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳಿದ್ದರು. ಇವರ ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚನ್ನಕೇಶವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರು ಪೋಷಕರು ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ
©2021 Tulunada Surya | Developed by CuriousLabs