Tuesday, June 25, 2024
spot_img
More

  Latest Posts

  ನೆಲ್ಯಾಡಿ: ನೆರೆಕರೆಯ ಇಬ್ಬರು ಯುವತಿಯರು ಒಂದೇ ದಿನ ಆಸ್ಪತ್ರೆಯಲ್ಲಿ ಮೃತ್ಯು- ಕಾರಣ ನಿಗೂಢ

  ನೆಲ್ಯಾಡಿ: ನೆರೆಕರೆಯ ಮನೆಯ ಇಬ್ಬರು ಯುವತಿಯರು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ಮೃತಪಟ್ಟರೆ, ಅವರ ನೆರೆಯಮನೆಯವರಾದ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಸುರತ್ಕಲ್ ಆಸ್ಪತ್ರೆಯಲ್ಲಿ ಮಧ್ಯಾಹ್ನ ಮೃತಪಟ್ಟರೆನ್ನಲಾಗಿದೆ.

  ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾಗಿದ್ದ ಇವರಿಬ್ಬರು ಮೃತಪಟ್ಟಿದ್ದಾರೆ.ಇವರಿಬ್ಬರು ಸೇವಾ ಪ್ರತಿನಿಧಿಯಾಗಿ ಕೆಲ ಸಮಯಗಳಿಂದ ಕಾರ್ಯವನ್ನು ನಿರ್ವಹಿಸುತ್ತಿದ್ದರು. ಎ.4ರಂದು ಸಂಜೆ ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ತೀವ್ರ ಅಸ್ವಸ್ಥಗೊಂಡಿದ್ದರು. ಇವರಿಬ್ಬರನ್ನು ಸ್ಥಳೀಯರ ಸಹಕಾರದಲ್ಲಿ ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಕ್ಷಿತಾ ಅವರನ್ನು ಅವರ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಲಾವಣ್ಯರನ್ನು ಅವರ ಮನೆಯವರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಯ ವೈದ್ಯರ ಸಲಹೆಯಂತೆ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ಷಿತಾ ಅವರನ್ನು ಅವರ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಲಾವಣ್ಯರನ್ನು ಅವರ ಮನೆಯವರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಯ ವೈದ್ಯರ ಸಲಹೆಯಂತೆ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಕ್ಷಿತಾ ಅವರು ಎ.6 ರoದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಲಾವಣ್ಯ ಮಧ್ಯಾಹ್ನ ಸುರತ್ಕಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇವರಿಬ್ಬರೂ ಪಟ್ಟೂರಿನಲ್ಲಿ ನೆರೆಕರೆಯವರಾಗಿದ್ದರು.
  ಇವರ ಸಾವಿಗೆ ಕಾರಣ ಏನು ಎಂದು ಸ್ಪಷ್ಟಗೊಂಡಿಲ್ಲ. ಈ ಬಗ್ಗೆ ವೈದ್ಯಕೀಯ ವರದಿ ಬಂದ ನಂತರವಷ್ಟೇ ತಿಳಿದು ಬರಬೇಕಾಗಿದೆ. ಇವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರ ಬಹುದೆಂದು ಶಂಕಿಸಲಾಗಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss