ಮೈಸೂರು : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ನಂಜನಗೂಡು ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮದ ರಸ್ತೆಯಲ್ಲಿ ತ್ರಿಬಲ್ ರೈಡ್ ಮಾಡಿಕೊಂಡು ಹೋಗುತ್ತಿದ್ದ ಮೂವರು ಯುವಕರಿಗೆ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನು ನೋಡಿ ಯು ಟರ್ನ್ ಹೊಡೆದಿದ್ದಾರೆ.
ಈ ವೇಳೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಚಿನ್ ಮತ್ತು ದೊರೆಸ್ವಾಮಿ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

