ಉಡುಪಿ: ಉಡುಪಿ ತಾಲೂಕಿನ ಕಟಪಾಡಿ ಸುಭಾಷ್ ನಗರ ರೈಲ್ವೇ ಸೇತುವೆ ಬಳಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀನಿವಾಸ್ ರಾವ್ (50) ಮೃತ ಬೈಕ್ ಸವಾರ. ಕಟಪಾಡಿಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಟೆಂಪೋ ಶಂಕರಪುರದಿಂದ ಕಟಪಾಡಿ ಕಡೆ ಹೋಗುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.