ಉಡುಪಿ: ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಆದಿ ಉಡುಪಿ ಶಾಖೆಯ ಕೆನರಾ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ.
ಅಲೆವೂರು ಗ್ರಾಮದ ಬನ್ನಂಜೆ ಪ್ರದೇಶದ ನಿವಾಸಿ ಅವರು ನೀಡಿದ ಲಿಖಿತ ದೂರಿನ ಮೇರೆಗೆ 19-02-2026 ರಂದು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 12/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 74ರಡಿ ಪ್ರಕರಣ ದಾಖಲಾಗಿದೆ.
ದೂರುದಾರರ ಹೇಳಿಕೆಯ ಪ್ರಕಾರ, 07-02-2026ರಂದು ಸಂಜೆ ಸುಮಾರು 5.30 ಗಂಟೆ ವೇಳೆಗೆ ಸಾಲ ಸಂಬಂಧಿತ ವಿಚಾರವಾಗಿ ಕರೆದುಕೊಂಡು ಹೋಗಿ, ಕಾರಿನಲ್ಲಿ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಿಸಲಾಗಿದೆ. ಈ ಸಂಬಂಧ ಕಾರು (ನಂ: HR-59 E-8192) ಬಳಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರು ಸ್ವೀಕರಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿದುಬರುವುದಾಗಿ ಪೊಲೀಸ್ ಮೂಲಗಳು ತಿಳಿಸಿದ್ದಾರೆ.

