ಉಡುಪಿ, ಏಪ್ರಿಲ್ 9: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಮಹತ್ವದ ಸಭೆ ಏಪ್ರಿಲ್ 12, 2026 (ಭಾನುವಾರ) ರಂದು ಬೆಳಿಗ್ಗೆ 10:30 ಗಂಟೆಗೆ ಉಡುಪಿ ನಗರದ ಕಾಪಿಯಾ ಹೋಟೆಲ್ ಸಮೀಪದ ಅಕ್ಷಯ ಟವರ್ಸ್ನಲ್ಲಿ ಇರುವ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ.
ಸಭೆಯನ್ನು ಜಿಲ್ಲಾ ಅಧ್ಯಕ್ಷರಾದ ಫ್ರಾಂಕಿ ಡಿಸೋಜ ಕೊಳಲಗಿರಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುತ್ತಿದ್ದು, ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ.
ಸಭೆಗೆ ಕಾರ್ಮಿಕ ಘಟಕ, ಯುವ ಘಟಕ, ಮಹಿಳಾ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು ಮತ್ತು ಸದಸ್ಯರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ.
ಸಭೆಯಲ್ಲಿ ಸಂಘಟನೆಯ ಅಭಿವೃದ್ಧಿ, ಮುಂದಿನ ಕಾರ್ಯಕ್ರಮಗಳ ರೂಪುರೇಷೆ ಹಾಗೂ ಸಂಘಟನಾ ಬಲವರ್ಧನೆ ಕುರಿತು ಮಹತ್ವದ ಚರ್ಚೆಗಳು ನಡೆಯಲಿದ್ದು, ಎಲ್ಲಾ ಸದಸ್ಯರು ಸಮಯಕ್ಕೆ ಸರಿಯಾಗಿ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





